ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.
ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ 52 ಬ್ರಟೀಷ್ ಪ್ರಜೆ, ಪೋರ್ಚ್ಗಲ್ 6 ಪ್ರಜೆಗಳು, ಇಬ್ಬರು ಪೈಲಟ್‌ಗಳು ಮತ್ತು 2 ಮಕ್ಕಳು ಸೇರಿದಂತೆ 8 ಸಿಬ್ಬಂದಿ ಇದ್ದರು. ಇದರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಇದ್ದರು. ಅವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.