• Home  
  • ಮಂಗಳೂರು ವಿವಿ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜು ತಂಡಕ್ಕೆ ಉಭಯ ವಿಭಾಗಗಳಲ್ಲಿ ಪ್ರಶಸ್ತಿ
- LATEST NEWS

ಮಂಗಳೂರು ವಿವಿ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜು ತಂಡಕ್ಕೆ ಉಭಯ ವಿಭಾಗಗಳಲ್ಲಿ ಪ್ರಶಸ್ತಿ

ಮಂಗಳೂರು,ಏಪ್ರಿಲ್ 15: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ರೋಚಕ ಕ್ರೀಡಾಕೂಟದಲ್ಲಿ ಮೂಡುಬಿದ್ರೆಯ ಆಳ್ವಾಸ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಮಾರೋಪ ಸಮಾರಂಭ: ಪಂದ್ಯಾಟದ ಸಮಾರೋಪ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ […]

Share News

ಮಂಗಳೂರು,ಏಪ್ರಿಲ್ 15: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ರೋಚಕ ಕ್ರೀಡಾಕೂಟದಲ್ಲಿ ಮೂಡುಬಿದ್ರೆಯ ಆಳ್ವಾಸ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಸಮಾರೋಪ ಸಮಾರಂಭ: ಪಂದ್ಯಾಟದ ಸಮಾರೋಪ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಕ್ರೀಡಾಳುಗಳ ಕ್ರೀಡಾ ಮನೋಭಾವವನ್ನು ಶ್ಲಾಘಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಜೋಸೆಫ್ ಎನ್. ಎಂ. ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಂಶುಪಾಲರಾದ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಮಾತನಾಡಿ, ಪಂದ್ಯಾಟದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನೂ ಸ್ಮರಿಸಿದರು. ವೇದಿಕೆಯಲ್ಲಿ ಪ್ರೊ.ಮ್ಯಾಕ್ಸಿಮ್ ಕಾರ್ಲ್, ಶ್ರೀ ಸೇಸಪ್ಪ ಗೌಡ, ಶ್ರೀ ಪ್ರವೀಣ್ ಕುಮಾರ್ ಕೆ, ಶ್ರೀ ಆಲ್ಬರ್ಟ್ ಮೊರಾಸ್ ಹಾಗೂ ಶ್ರೀ ಜೈನುದ್ದಿನ್ ಉಪಸ್ಥಿತರಿದ್ದರು. ಪಂದ್ಯಾಟದ ಫಲಿತಾಂಶ:

  • ಪುರುಷರ ವಿಭಾಗ:

    ಆಳ್ವಾಸ್ ಕಾಲೇಜ್ ಮೂಡುಬಿದ್ರೆ (ಪ್ರಥಮ), ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ (ದ್ವಿತೀಯ), ಮಂಗಳೂರು ವಿ.ವಿ. ಕ್ಯಾಂಪಸ್ ಕೊಣಾಜೆ (ತೃತೀಯ) ಹಾಗೂ ಸೇಕ್ರೆಡ್ ಹಾರ್ಟ್ ಕಾಲೇಜು (ನಾಲ್ಕನೇ ಸ್ಥಾನ).
  • ಮಹಿಳೆಯರ ವಿಭಾಗ:

    ಆಳ್ವಾಸ್ ಕಾಲೇಜ್ ಮೂಡುಬಿದ್ರೆ (ಪ್ರಥಮ), ಎಸ್.ಡಿ.ಪಿ.ಟಿ. ಪ್ರಥಮ ದರ್ಜೆ ಕಾಲೇಜು ಕಟೀಲು (ದ್ವಿತೀಯ), ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ (ತೃತೀಯ) ಹಾಗೂ ಸೇಕ್ರೆಡ್ ಹಾರ್ಟ್ ಕಾಲೇಜು (ನಾಲ್ಕನೇ ಸ್ಥಾನ)
  • ಕಾರ್ಯಕ್ರಮದಲ್ಲಿ ಶ್ರೀ ಪ್ರವೀಣ್ ಕುಮಾರ್ ಕೆ ವರದಿ ವಾಚಿಸಿದರು. ಶ್ರೀ ಈಶ್ವರ್ ಗೌಡ ಸ್ವಾಗತಿಸಿ, ಡಾ. ಪ್ರಕಾಶ್ ಡಿ. ಸೋಜಾ ವಂದಿಸಿದರು. ಸ್ನಾತಕೋತ್ತರ ವಿಭಾಗದ ಪ್ರೊ. ಶ್ರೀ ನೆಲ್ಸನ್ ಮೋನೀಸ್ ಕಾರ್ಯಕ್ರಮ ನಿರ್ವಹಿಸಿದರು. ಒಟ್ಟು 9 ಪುರುಷರ ಮತ್ತು 8 ಮಹಿಳೆಯರ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.
Share News