• Home  
  • ಪೆಹಲ್ಗಾಮ್‌ ದಾಳಿ ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ
- COMMUNITY NEWS - LATEST NEWS

ಪೆಹಲ್ಗಾಮ್‌ ದಾಳಿ ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ

ಮಂಗಳೂರು: ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ.

ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ.

ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡೆಯಬೇಕು.

ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರು ಆಗಲಿ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಆತ್ಮಗಳಿಗೆ ಶಾಂತಿ ಕೋರುತ್ತೇವೆ ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678