Site icon canaratvnews

ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

 

ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.

ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದ ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಅಪೇಕ್ಷೆ ಮೇರೆಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅನೇಕ ಅನುಕೂಲತೆಗಳನ್ನು ನೀಡಿದ್ದಾರೆ. ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಫಲವಾಗಿ ಇಂದು ದೇಶದ ಕೋಟ್ಯಾಂತರ ಜನರು ನಿಟ್ಟುಸಿರು ಬಿಡುತ್ತಿದ್ದಾರೆ ಎಂದು ಸ್ಮರಿಸಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ಬಲಿಷ್ಠವಾಗಿ ಉಳಿಯಲು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕಾರಣ. ಅಸ್ಪೃಶ್ಯತೆಯ ವಿಷವರ್ತುಲದಲ್ಲಿ ಎಲ್ಲ ಹಕ್ಕುಗಳಿಂದ ವಂಚಿತರಾಗಿದ್ದ ಶೋಷಿತ ಸಮುದಾಯಗಳ ವಿಮೋಚನೆಗಾಗಿ, ಹಕ್ಕುಗಳಿಗಾಗಿ ಅವರು ಹೋರಾಡಿದರು. ಸಂವಿಧಾನದ ಬದಲಾವಣೆಯ ಬಗ್ಗೆ ಮಾತನಾಡುವ ಬಿಜೆಪಿಗರು ಅಂಬೇಡ್ಕರ್ ಅವರ ವಿಚಾರಗಳನ್ನು ಗೌರವಿಸುತ್ತಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್. ಮಹಮ್ಮದ್, ಮಿಥುನ್ ರೈ, ಲೋಕಸಭಾ ಅಭ್ಯರ್ಥಿ ಪದ್ಮರಾಜ್.ಆರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಅಬ್ದುಲ್ ಸಲೀಂ, ಮೋಹನ್ ಕೋಟ್ಯಾನ್ ಮುಲ್ಕಿ, ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಕೃಷ್ಣ ಪ್ರಸಾದ್ ಆಳ್ವ ಪುತ್ತೂರು, ಮುಖಂಡರಾದ ಶಶಿಧರ್ ಹೆಗ್ಡೆ, ಜಿ.ಕೃಷ್ಣಪ್ಪ, ಅಬ್ದುಲ್ ರವೂಫ್, ಪಿಯೂಸ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಲ್ಯಾನ್ಸ್ ಲೋಟೊ ಪಿಂಟೊ, ಟಿ.ಹೊನ್ನಯ್ಯ, ಕೆ.ಪಿ.ಥೋಮಸ್, ಕೇಶವ ಮರೋಳಿ, ಕೆ.ಕೆ.ಶಾಹುಲ್ ಹಮೀದ್, ಇಬ್ರಾಹೀಂ ನವಾಝ್, ಜೋಕಿಂ ಡಿಸೋಜ, ದಿನೇಶ್ ಮುಳೂರು, ಸುರೇಂದ್ರ ಕಂಬಳಿ, ವಿಶ್ವಾಸ್ ಕುಮಾರ್ ದಾಸ್, ನವೀನ್ ಡಿಸೋಜ, ಸುದರ್ಶನ್ ಜೈನ್, ಕೆ.ಅಪ್ಪಿ, ಅಬ್ಬಾಸ್ ಅಲಿ, ಅಶ್ರಫ್ ಬಜಾಲ್, ನೀರಜ್ ಚಂದ್ರಪಾಲ್, ಸಂಶುದ್ದೀನ್ ಬಂದರ್, ನಝೀರ್ ಬಜಾಲ್, ಶಾಲೆಟ್ ಪಿಂಟೊ, ಮತ್ತಿತರರು ಉಪಸ್ಥಿತರಿದ್ದರು.

Share News
Exit mobile version