ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯೋಣವೆಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ, ಲಲ್ಲೇಶ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಶಿವಪ್ರಸಾದ್, ಗೀತಾ ಸುಂಕದಕಟ್ಟೆ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ವಿಜಯ್ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಯಶವಂತ ಕುದ್ರೋಳಿ, ಅಣ್ಣಯ್ಯ ಕುಲಾಲ್, ನಾರಾಯಣ ಗಟ್ಟಿ, ರಾಜೇಂದ್ರ ಕುಮಾರ್, ಉಮಾನಾಥ ಅಮೀನ್ಸೇರಿದಂತೆ ಮಂಡಲ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಮ.ನ.ಪಾ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಭರತ್ ಕುಮಾರ್ ಸ್ವಾಗತಿಸಿದರು. ರಘುವೀರ್ ಬಾಬುಗುಡ್ಡೆ ಕಾರ್ಯಕ್ರಮವನ್ನು ನಿರೂಪಿಸಿದರು.