• Home  
  • ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
- DAKSHINA KANNADA - HOME - LATEST NEWS - STATE

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಮಂಗಳೂರು:- 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ ಮುಖಾಂತರ ಗ್ರಾಮ ಒನ್, ಮಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವರಾಜ ಅರಸು ನಿಗಮದ ವೆಬ್‌ಸೈಟ್‌ ಲಿಂಕ್‌: https://dbcdc.karnataka.gov.in/

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678