• Home  
  • ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ
- HOME - LATEST NEWS

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಬಂಟ್ವಾಳ, ಜುಲೈ 6: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟರಿಗೆ (ಬಿ.ಎಲ್.ಎ) ಮತ್ತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನ ಕಾಂಗ್ರೆಸ್ ಕಚೇರಿಯಲ್ಲಿ ‘ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ’ವನ್ನು ತೆರೆಯಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿ. ರಮಾನಾಥ ರೈ, “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ತಡೆಯಲು ಮತ್ತು ಅರ್ಹ […]

Share News

ಬಂಟ್ವಾಳ, ಜುಲೈ 6: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟರಿಗೆ (ಬಿ.ಎಲ್.ಎ) ಮತ್ತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನ ಕಾಂಗ್ರೆಸ್ ಕಚೇರಿಯಲ್ಲಿ ‘ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ’ವನ್ನು ತೆರೆಯಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿ. ರಮಾನಾಥ ರೈ, “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ತಡೆಯಲು ಮತ್ತು ಅರ್ಹ ಮತದಾರರಿಗೆ ಸೂಕ್ತ ಮಾಹಿತಿ ನೀಡಲು ಈ ಸಹಾಯ ಕೇಂದ್ರ ಸಹಕಾರಿಯಾಗಲಿದೆ. ಬಿ.ಎಲ್.ಎ.ಗಳು, ಬೂತ್ ಮಟ್ಟದ ಕಾರ್ಯಕರ್ತರು ಮತ್ತು ಗ್ರಾಮದ ಮುಖಂಡರು ಒಟ್ಟಾಗಿ ಕೆಲಸ ಮಾಡಿ, ಪ್ರತಿಯೊಬ್ಬರಿಗೂ ನೆರವು ತಲುಪಿಸಬೇಕು” ಎಂದರು.

ಈ ಮಾಹಿತಿ ಸೇವಾ ಕೇಂದ್ರದಲ್ಲಿ ಎಸ್.ಐ.ಆರ್. ಅರ್ಜಿ ಭರ್ತಿ, ಅಗತ್ಯ ದಾಖಲೆಗಳ ಕುರಿತು ಮಾಹಿತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಮಾರ್ಗದರ್ಶನ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿರಲಿದ್ದು, ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಈ ಮಾಹಿತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಆರ್. ಅಂಚನ್, ಚಂದ್ರಶೇಖರ್ ಭಂಡಾರಿ, ರವೀಂದ್ರ ಕಾಂಬಲಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಜಯಂತಿ ಪೂಜಾರಿ, ಐಡಾ ಸುರೇಶ್, ಪದ್ಮಶೇಖರ್ ಜೈನ್, ಎಂ.ಎಸ್. ಮೊಹಮ್ಮದ್, ಸಂಜೀವ ಪೂಜಾರಿ, ಅಬ್ಬಾಸ್ ಅಲಿ, ಪದ್ಮನಾಭ ರೈ, ಸುಭಾಷ್ ಕೊಲ್ನಾಡು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Share News