LATEST NEWS

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ ಉದ್ಘಾಟನೆ

ಮಂಗಳೂರು: ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವದಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುವಂತಾಗಲಿ ಎಂದು ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಇದರ ಸದಸ್ಯ ಹಾಗೂ ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಅವರು ಹೇಳಿದರು.
ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾದ ಬಂಟ ಕ್ರೀಡೋತ್ಸವ-2026 ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ ಸಮಗ್ರ ಸಮಾಜದ ಒಗ್ಗಟ್ಟು-ಭಾವೈಕ್ಯತೆಗಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯoತಾಯ ಅಡ್ಯಾರುಗುತ್ತು ಅವರು ಮಾತನಾಡಿ, ಕ್ರೀಡಾಕೂಟ ಹಮ್ಮಿಕೊಂಡ ಸಂಘಟಕರನ್ನು ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಾಜಿ ರಣಜಿ ಕ್ರಿಕೆಟ್ ಆಟಗಾರ ರಕ್ಷಣ್ ರೈ ಅವರು ಕ್ರೀಡಾ ಪಟುಗಳ ಪಥಸಂಚಲನಕ್ಕೆ ಚಾಲನೆ ನೀಡಿದರು. ಲಾತೂರಿನ ಉದ್ಯಮಿ ದಿವಾಕರ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು.


ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಸ್ಟಿಗಳಾದ ಡಾ.ಆಶಾಜ್ಯೋತಿ ರೈ , ಕೃಷ್ಣಪ್ರಸಾದ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸದಾಶಿವಶೆಟ್ಟಿಬಿಜೈ ಮತ್ತಿತರರು ಉಪಸ್ಥಿತರಿದ್ದರು.


ಅನೂಪ್ ಶೆಟ್ಟಿ ಪ್ರಾರ್ಥಿಸಿದರು. ಬಂಟ ಕ್ರೀಡಾ ಕೂಟದ ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ ಸ್ವಾಗತಿಸಿದರು. ಸಂಚಾಲಕ ಕಿರಣ್ ಪಕ್ಕಳ ಪೆರ್ಮಂಕಿಗುತ್ತು ವಂದಿಸಿದರು. ಗಣೇಶೋತ್ಸವ ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ಕಾರ್ಯಕ್ರಮ ನಿರೂಪಿಸಿದರು.

Share News