ಬಂಟ್ವಾಳ: ಪಾಣೆಮಂಗಳೂರು ಮತ್ತು ಬಂಟ್ವಾಳ ಕಾಂಗ್ರೆಸ್ ಸಮಿತಿಗಳ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕರಡು ಮತದಾರರ ಪಟ್ಟಿ ಬಿಡುಗಡೆ ಹಾಗೂ ಮುಂದಿನ ಪ್ರಕ್ರಿಯೆಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿ.ಸಿ.ರೋಡಿನ ಗಾಣದಪಡ್ಪು ಸ್ಪರ್ಶ ಕಲಾ ಮಂದಿರದಲ್ಲಿ ಜರುಗಿತು.

ಸನ್ಮಾನ್ಯ ಶ್ರೀ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಮತದಾರರ ಪಟ್ಟಿಯ ಪರಿಷ್ಕರಣೆ, ಕರಡು ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂದಿನ ಕಾನೂನಾತ್ಮಕ ಪ್ರಕ್ರಿಯೆಗಳ ಕುರಿತು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ಅರ್ಹ ಮತದಾರರು ಪಟ್ಟಿಯಿಂದ ವಂಚಿತರಾಗದಂತೆ ಜಾಗೃತಿ ವಹಿಸಲು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.

ಈ ಪ್ರಮುಖ ಮಾಹಿತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.




