• Home  
  • ಬಂಟ್ವಾಳ: ಚಿನ್ನಾಭರಣಕ್ಕಾಗಿ ವೃದ್ಧೆಯ ಕೊಲೆ ಪ್ರಕರಣ- ಕೆಲಸದಾಕೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ
- DAKSHINA KANNADA - HOME - LATEST NEWS

ಬಂಟ್ವಾಳ: ಚಿನ್ನಾಭರಣಕ್ಕಾಗಿ ವೃದ್ಧೆಯ ಕೊಲೆ ಪ್ರಕರಣ- ಕೆಲಸದಾಕೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಚಿನ್ನಾಭರಣದ ಆಸೆಗಾಗಿ ವೃದ್ಧೆಯ ಆರೈಕೆಗಾಗಿ ನಿಂತಿದ್ದಾಕೆಯೇ ತನ್ನ ಇಬ್ಬರು ಸಹಚರರೊಂದಿಗೆ ಕೊಲೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಪ್ರಕರಣದ ವಿವರ ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23)ಎಂಬಾಕೆಯು, ವೃದ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ […]

Share News

ಬಂಟ್ವಾಳ: ಚಿನ್ನಾಭರಣದ ಆಸೆಗಾಗಿ ವೃದ್ಧೆಯ ಆರೈಕೆಗಾಗಿ ನಿಂತಿದ್ದಾಕೆಯೇ ತನ್ನ ಇಬ್ಬರು ಸಹಚರರೊಂದಿಗೆ ಕೊಲೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.

ಪ್ರಕರಣದ ವಿವರ

ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23)ಎಂಬಾಕೆಯು, ವೃದ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಾರೆ. ಅದರಲ್ಲಿ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಬಂಟ್ವಾಳ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನ ಸಹಾಯದಿಂದ 2021 ರ ಜ.25ರಂದು ರಾತ್ರಿ, ಬೆನಡಿಕ್ಟ್ ಕಾರ್ಲೋರವರನ್ನು ಉಸಿರುಗಟ್ಟಿಸಿ ಕೊಲೆಗೈದಿದ್ದರು. ನಂತರ ಆಕೆಯ ಬಳಿಯಿದ್ದ ಒಟ್ಟು 61.070ಗ್ರಾಂ ತೂಕದ (ಅಂದಿನ ರೂ.03 ಲಕ್ಷ ಮೌಲ್ಯ) ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ22/2021, ಕಲಂ: 302, 392, 120 (ಬಿ), 201 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದಲ್ಲಿ ಆಗಿನ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಮ್.ಎಸ್ ರವರು ಆರೋಪಿಗಳನ್ನು ವಶಕ್ಕೆ ಪಡೆದು, ಆಗಿನ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಸದ್ರಿ ಮೂವರು ಆರೋಪಿಗಳ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮಂಗಳೂರಿನಲ್ಲಿ ಪ್ರಕರಣದ ವಿಚಾರಣೆ ನಡೆದು, ಜು.28ರಂದು ಮಾನ್ಯ ನ್ಯಾಯಾಧೀಶರಾದ ಜಗದೀಶ್‌ ವಿ.ಎನ್. ರವರು ಪ್ರಕರಣದ ಮೂವರೂ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ್‌ ನಾಯಕ್‌ ಅವರು ವಾದ‌ ಮಂಡನೆ ನಡೆಸಿದ್ದರು.

Share News