ಮಂಗಳೂರು, ಜೂನ್ 11: ಮಂಗಳೂರು ಬಾರ್ ಅಸೋಸಿಯೇಷನ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ, ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ವಕೀಲರಾದ ಶ್ರೀ ಜಗದೀಶ್ ಶೇಣವ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಪ್ರಮುಖ ಸಭೆಯ ಸಂದರ್ಭದಲ್ಲಿ ಈ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀ ಜಗದೀಶ್ ಶೇಣವ ಅವರು ಕಾನೂನು ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ಬಾರ್ ಅಸೋಸಿಯೇಷನ್ ಚುನಾವಣೆಯ ಯಶಸ್ಸನ್ನು ಶ್ಲಾಘಿಸಿ ಪಕ್ಷದ ವತಿಯಿಂದ ಶಾಲು ಹೊದಿಸಿ, ಹಾರ ಹಾಕಿ ಗೌರವಿಸಲಾಯಿತು.

ಈ ಸನ್ಮಾನ ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ, ಶಾಸಕರಾದ ಪ್ರತಾಪಸಿಂಹ ನಾಯಕ್, ಡಿ. ವೇದವ್ಯಾಸ್ ಕಾಮತ್, ಭಾಗೀರಥಿ ಮುರುಳ್ಯ ಮತ್ತು ಕಿಶೋರ್ ಕುಮಾರ್ ಪುತ್ತೂರು ಉಪಸ್ಥಿತರಿದ್ದರು.

ಇವರೊಂದಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ ಹಾಗೂ ಬಿಜೆಪಿಯ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರಮುಖರು ಮತ್ತು ಹಿರಿಯ ಮುಖಂಡರು ಭಾಗವಹಿಸಿದ್ದರು.

