DAKSHINA KANNADAHOMELATEST NEWS

ವಿಟ್ಲ: ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಬೈಕ್‌ ಢಿಕ್ಕಿಯಾಗಿ ಸಾವು- ಸವಾರ ಗಂಭೀರ

ವಿಟ್ಲ: ಪಾದಾಚಾರಿ ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. .ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Share News