ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಗುಜರಾತ್ ಬಳಿಕ ರಾಜ್ಯವೇ ಅಭಿವೃದ್ಧಿಯಲ್ಲಿ ಅಗ್ರಪಂಕ್ತಿಯಲ್ಲಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಬಂದ ಬಳಿಕ ರ‍್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಆಗಿದೆ. ಇದನ್ನು ಸಿಎಂ ಅವರ ರ‍್ಥಿಕ ಸಲಹೆಗಾರ ಬಸವರಾಯರೆಡ್ಡಿ ಅವರೇ ಹೇಳಿದ್ದಾರೆ. ಇದುವೇ ಕಾಂಗ್ರೆಸ್ನ ನಿಜವಾದ ಆಡಳಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಬಿಜೆಪಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಬುಧವಾರ ಆಯೋಜಿಸಲಾದ ಜನಾಕ್ರೋಶ ಯಾತ್ರೆಯ ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಸಿಎಂ ಆದ ಮೇಲೆ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ ಸಹಿತ 50ಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಜಮ್ಮು ಅಭಿವೃದ್ಧಿಗೆ ಅನುದಾನ ನೀಡಿದ ಪ್ರಧಾನಿ ಮೋದಿ ಅವರನ್ನು ಜಮ್ಮು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಭಿನಂದಿಸಿದ್ದಾರೆ. ಆದರೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರಕಾರ ಕೇಂದ್ರದ ವಿರುದ್ಧದ ಹಾದಿ ತುಳಿದಿದೆ ಎಂದ ಅವರು, ತಮ್ಮ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಬಹಿರಂಗವಾಗಿ ಹೇಳುತ್ತಿದ್ದಾರೆ ಎಂದರು.
ರಾಜ್ಯದ ಮುಖ್ಯಮಂತ್ರಿ ಆದ ಮೇಲೆ ಸಿದ್ದರಾಮಯ್ಯ ಅವರು ಎಷ್ಟು ಬಾರಿ ಮಂಗಳೂರಿಗೆ ಭೇಟಿ ಕೊಟ್ಟಿದ್ದೀರಿ, ಎಷ್ಟು ಅನುದಾನ ಕೊಟ್ಟಿದ್ದೀರಿ, ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದಲ್ಲಿ ಇಲ್ಲವೇ ಎಂದು ವಿಜಯೇಂದ್ರ ಪ್ರಶ್ನಿಸಿದರು.
ಕಾಂಗ್ರೆಸ್ ಆಡಳಿತದಲ್ಲಿ ಮುಸ್ಲಿಂ ಓಲೈಕೆಯೇ ನಡೆಯುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ದೇಶದ್ರೋಹಿಗೆ ಇನ್ನರ‍್ವ ದೇಶದ್ರೋಹಿ ಮುತ್ತಿಕ್ಕಿದ್ದಾನೆ. ಬಿಜೆಪಿ ಸರಕಾರ, ಯಡಿಯೂರಪ್ಪ ಸರಕಾರ ಇರುತ್ತಿದ್ದರೆ ಆ ದೇಶದ್ರೋಹಿಗೆ ಗುಂಡಿಕ್ಕುತ್ತಿದ್ದೆವು ಎಂದು ಹೇಳಿದರು.