ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಜೆ. ಪಿ. ನಡ್ಡಾ ಮೇ 11 ರಂದು ಭೇಟಿ ನೀಡಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.
ಜೆ. ಪಿ. ನಡ್ಡಾ ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದ ವೇಳೆ ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಮತ್ತಿತರ ನಾಯಕರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಲಿದ್ದಾರೆ.