canaratvnews

ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ SC ಮೋರ್ಚಾ ವತಿಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನಾಚರಣೆ

ಮಂಗಳೂರು. ಡಿ 06: ಸಂವಿಧಾನ‌ ಶಿಲ್ಪಿ, ಭಾರತ ರತ್ನ‌ ಡಾ. ಬಿ. ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಬಾಬಾ ಸಾಹೇಬರು ಕೇವಲ ದಲಿತರ ಪರ ಹೋರಾಟಗಾರ ಅಲ್ಲ. ಈ ದೇಶದ ಪ್ರತಿಯೊಬ್ಬ ಅಸಹಾಯಕನ ಶೋಷಿತನ ಪರವಾಗಿ ಮಿಡಿದ ಮಹಾ ಮಾನವತಾವಾದಿ ಅವರು. ಅಂತಹ ಶ್ರೇಷ್ಠ ವ್ಯಕ್ತಿಯನ್ನು ಕಾಂಗ್ರೆಸ್ ಚುನಾವಣೆಯಲ್ಲಿ ಹೀನಾಯವಾಗಿ ಸೋಲುವಂತೆ ಮಾಡಿದ್ದು ಈ ದೇಶದ ದುರಂತ. ಬಾಬಾ ಬಾಬಾ ಸಾಹೇಬರು ನಮಗೆ ನೀಡಿದ ಸರ್ವ ಶ್ರೇಷ್ಠ ಸಂವಿಧಾನದ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ ಎಂದರು. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಮಾತನಾಡಿ ಮಹಾ ಮಾನವತಾವಾದಿ ಅಂಬೇಡ್ಕರ್ ಅವರ ಸಂವಿಧಾನದ ಆಶಯಕ್ಕೆ ತಕ್ಕಂತೆ ನಾವೆಲ್ಲರೂ ನಡೆದುಕೊಂಡರೆ ಅದುವೇ ಅವರಿಗೆ ನಾವು ನೀಡುವ ಶ್ರೇಷ್ಠ ಗೌರವ ಎಂದರು

ಸಂಸದರಾದ ಕ್ಯಾ. ಬೃಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಸುದೀರ್ ಶೆಟ್ಟಿ ಕಣ್ಣೂರು, ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ, ಬಿಜೆಪಿ ಪ್ರಮುಖರಾದ ಪೂರ್ಣಿಮಾ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ನಂದನ್ ಮಲ್ಯ, ವಸಂತ್ ಜೆ.ಪೂಜಾರಿ, ಮೋನಪ್ಪ ಭಂಡಾರಿ, ನಿತಿನ್ ಕುಮಾರ್, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share News
Exit mobile version