ವಿಟ್ಲ: ಜೂನ್.17: ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲತ್ತಡ್ಕದಲ್ಲಿ 2026-2027ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಪಠ್ಯ ಉಪಕರಣಗಳ ವಿತರಣೆ ಕಾರ್ಯಕ್ರಮ ವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸಚಿನ್ ಅಡ್ವಾಯಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋರಾಜ್ ರೈ ಅಡ್ವಾಯಿ ಹಾಗೂ ಶ್ರೀನಿವಾಸ ಶೆಟ್ಟಿ ಕೆಳಗಿನ ಮನೆ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿ ಶುಭ ಹಾರೈಸಿದರು. ವಿದ್ಯಾಭಿಮಾನಿಗಳಾದ ಗೋವಿಂದ ಭಟ್ ಕಡೆಂಗೋಡ್ಲು ಮತ್ತು ಬಾಲಕೃಷ್ಣ ಪೂಜಾರಿ ಪೆರುವಾಯಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲೆಯ ಹಳೆ ವಿದ್ಯಾರ್ಥಿಯಾದ ಮಧುರಾಜ್ (ಸಿ.ಎ) ಅಡ್ವಾಯಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ಹಾಗೂ ಮತ್ತೊಬ್ಬ ಹಳೆ ವಿದ್ಯಾರ್ಥಿ ಶ್ರೀನಿವಾಸ ಶೆಟ್ಟಿ ಕೆಳಗಿನ ಮನೆ ಪಠ್ಯ ಉಪಕರಣಗಳನ್ನು ಕೊಡುಗೆಯಾಗಿ ನೀಡಿದರು.

ವಿದ್ಯಾರ್ಥಿನಿಯರಾದ ಮನ್ವಿತಾ, ಜಯಶ್ರೀ ಹಾಗೂ ಅದ್ವಿಕಾ ಪ್ರಾರ್ಥಿಸಿದರು. ಶಾಲಾ ಶಿಕ್ಷಕಿಯರಾದ ಅಶ್ವಿನಿ, ಉಷಾ, ಮಾಲತಿ ಹಾಗೂ ನಳಿನಿ ಸಹಕರಿಸಿದರು. ಮುಖ್ಯ ಶಿಕ್ಷಕ ಪ್ರಭಾಕರ ಎಂ. ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಹಾಗೂ ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.






