HOME

ಮೂಡಾ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಯುವ ನಾಯಕ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಮೂಡಾ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿ, ಗೌರವ ಪೂರ್ವಕವಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಅವರು, “ಸಂತೋಷ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಪಕ್ಷದ ಬಲವರ್ಧನೆಗೆ ದುಡಿದಿದ್ದಾರೆ. ಪಕ್ಷಕ್ಕಾಗಿ ಅವರು ಸಲ್ಲಿಸಿದ ನಿರಂತರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಅವರಿಗೆ ಮೂಡಾ ಅಧ್ಯಕ್ಷ ಸ್ಥಾನದಂತಹ ಉನ್ನತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನೀಡಿದೆ. ಸಂತೋಷ್ ಶೆಟ್ಟಿ ಅವರ ಯುವ ನಾಯಕತ್ವದಲ್ಲಿ ಮಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಹಾಗೂ ವಿವಿಧ ಜನಪರ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳಲಿ” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರು ಹಾಗೂ ಮೂಡಾ ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share News