ಮಂಗಳೂರು : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ಯೂತ್ ರೆಡ್‌ಕ್ರಾಸ್ ಮತ್ತು ಐಕ್ಯುಎಸಿ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಪ್ರಥಮ ಚಿಕಿತ್ಸೆ ದಿನಾಚರಣೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ” ಅಪಘಾತ, ಹಾವು ಕಡಿತ ಮುಂತಾದ ದುರ್ಘಟನೆ ಸಂದರ್ಭ ಸೂಕ್ತ ಪ್ರಥಮ ಚಿಕಿತ್ಸೆ ನೀಡುವುದರಿಂದ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗುತ್ತದೆ. ಸಕಾಲದಲ್ಲಿ ಪ್ರಥಮ ಚಿಕಿತ್ಸೆ ನೀಡುವವರ ಸಮಯ ಪ್ರಜ್ಞೆ ಮತ್ತು ಜ್ಞಾನ ಗಾಯಾಳುವಿನ ಚಿಕಿತ್ಸೆಗೆ ನೆರವಾಗುತ್ತದೆ. ವಿದ್ಯಾರ್ಥಿಗಳು ಸಹಿತ ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದುವುದು ಅಗತ್ಯ ‘ಎಂದರು.
ರೆಡ್‌ಕ್ರಾಸ್ ಆಡಳಿತ ಮಂಡಳಿ ನಿರ್ದೇಶಕರಾದ ರಾಘವೇಂದ್ರ ರಾವ್ ಮತ್ತು ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಗೋಪಾಲಕೃಷ್ಣ ಕೆ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ನಿಟ್ಟೆ ವಿ.ವಿ.ಯ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಉಪನ್ಯಾಸಕಿ ಕೀರ್ತಿಮಾಲಾ ಕೆ ಅವರು ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು. ಯೂತ್ ರೆಡ್‌ಕ್ರಾಸ್ ನಿರ್ದೇಶಕಿ ಡಾ.ಸುಮನ .ಬಿ., ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಜಯಶ್ರೀ .ಕೆ.ಯೂತ್ ರೆಡ್‌ಕ್ರಾಸ್ ಕಾರ್ಯದರ್ಶಿ ಶಿಲ್ಪಾ ,ಐಕ್ಯುಎಸಿ ಸಂಯೋಜಕಿ ಡಾ.ಮಂಜುಳಾ ಮಲ್ಯ.ಎಂ., ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿ ಡಾ.ಮೀನಾಕ್ಷಿ ಆಚಾರ್ಯ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಜುಲ್ಫಾ ಸ್ವಾಗತಿಸಿ, ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಹಾಜಿರಾ ಅಬಿದ್ ಮನ್ನ ಕಾರ್ಯಕ್ರಮ ನಿರೂಪಿಸಿದರು.
