ಮಂಗಳೂರು: ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O) ಇವರ ಜಂಟಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಸಲಾದ ಸಮಗ್ರ ‘ಮನೆ-ಮನೆ ಸಮೀಕ್ಷೆ’ಯ ವರದಿ ಬಿಡುಗಡೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಜಿಲ್ಲೆಯಾದ್ಯಂತ ಕ್ಯಾನ್ಸರ್ ಬಗ್ಗೆ ಇರುವ ಅರಿವು, ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು 20 ಪ್ರಮುಖ ಪ್ರಶ್ನೆಗಳನ್ನೊಳಗೊಂಡ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಈ ವರದಿಯು ಕರಾವಳಿ ಕರ್ನಾಟಕದ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಹತ್ವದ ಮಾಹಿತಿ ಯನ್ನು ನೀಡಲಿದ್ದು, ಇದನ್ನು ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಇಲಾಖೆಗೆ ಸಲ್ಲಿಸಲಾಗುವುದು.


ಸಮೀಕ್ಷೆಯ ಪ್ರಮುಖ ಅಂಶಗಳನ್ನು ವಿಡಿಯೋ ಮೂಲಕ ಪ್ರಸ್ತುತಪಡಿಸಲಾಯಿತು. ಕ್ಯಾನ್ಸರ್ ಆರಂಭಿಕ ಪತ್ತೆ ಮತ್ತು ತಡೆಗಟ್ಟುವಿಕೆಯ ಅಗತ್ಯತೆಯ ಬಗ್ಗೆ ತಜ್ಞರು ಚರ್ಚಿಸಿದರು.







