canaratvnews

*ಕ್ಯಾನ್ಸರ್ ಮುಕ್ತ ಸಮಾಜದತ್ತ ಸಂಜೀವಿನಿ ಟ್ರಸ್ಟ್ ಮತ್ತು M.I.O ಹೆಜ್ಜೆ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಮಗ್ರ ಕ್ಯಾನ್ಸರ್ ಜಾಗೃತಿ ಸಮೀಕ್ಷೆ*

ಮಂಗಳೂರು: ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O) ಇವರ ಜಂಟಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಸಲಾದ ಸಮಗ್ರ ‘ಮನೆ-ಮನೆ ಸಮೀಕ್ಷೆ’ಯ ವರದಿ ಬಿಡುಗಡೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಜಿಲ್ಲೆಯಾದ್ಯಂತ ಕ್ಯಾನ್ಸರ್ ಬಗ್ಗೆ ಇರುವ ಅರಿವು, ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು 20 ಪ್ರಮುಖ ಪ್ರಶ್ನೆಗಳನ್ನೊಳಗೊಂಡ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಈ ವರದಿಯು ಕರಾವಳಿ ಕರ್ನಾಟಕದ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಹತ್ವದ ಮಾಹಿತಿ ಯನ್ನು ನೀಡಲಿದ್ದು, ಇದನ್ನು ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಇಲಾಖೆಗೆ ಸಲ್ಲಿಸಲಾಗುವುದು.

ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್‌ನ ಅಧ್ಯಕ್ಷರು ಹಾಗೂ M.I.O ನಿರ್ದೇಶಕರಾದ ಡಾ. ಸುರೇಶ್ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳು: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಮತ್ತು ಡೈಜಿವರ್ಲ್ಡ್ ಮೀಡಿಯಾ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ ಅವರು ಪಾಲ್ಗೊಂಡು ಜಾಗೃತಿ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.


ಸಮೀಕ್ಷೆಯ ಪ್ರಮುಖ ಅಂಶಗಳನ್ನು ವಿಡಿಯೋ ಮೂಲಕ ಪ್ರಸ್ತುತಪಡಿಸಲಾಯಿತು. ಕ್ಯಾನ್ಸರ್ ಆರಂಭಿಕ ಪತ್ತೆ ಮತ್ತು ತಡೆಗಟ್ಟುವಿಕೆಯ ಅಗತ್ಯತೆಯ ಬಗ್ಗೆ ತಜ್ಞರು ಚರ್ಚಿಸಿದರು.

ಸಮೀಕ್ಷೆಯ ವರದಿಯ ಆಧಾರದ ಮೇಲೆ ಸರ್ಕಾರವು ಆರೋಗ್ಯ ಸೇವೆಗಳನ್ನು ವಿಸ್ತರಿಸಲು ಮತ್ತು ಆರಂಭಿಕ ಪತ್ತೆಗೆ ಪೂರಕವಾದ ನೀತಿಗಳನ್ನು ರೂಪಿಸಲು ಈ ವರದಿ ಮಾರ್ಗದರ್ಶನ ನೀಡಲಿದೆ ಎಂದು ಆಯೋಜಕರು ಆಶಿಸಿದ್ದಾರೆ.

ಈ ಜಾಗೃತಿ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಸಂಘಟಕರು ಮನವಿ ಮಾಡಿದರು. ಸಮೀಕ್ಷೆಗೆ ಸಹಕರಿಸಿದ ವೈದ್ಯರು, ಸ್ವಯಂಸೇವಕರು ಮತ್ತು ಸಾರ್ವಜನಿಕರಿಗೆ ಡಾ. ಸುರೇಶ್ ರಾವ್ ಅವರು ಕೃತಜ್ಞತೆ ಸಲ್ಲಿಸಿದರು.

Share News
Exit mobile version