• Home  
  • ಸುಳ್ಯ: ನಿಯಂತ್ರಣ ತಪ್ಪಿ ಮನೆ ಮಹಡಿ ಮೇಲೆ ಬಿದ್ದ ಕಾರು
- DAKSHINA KANNADA - HOME - LATEST NEWS

ಸುಳ್ಯ: ನಿಯಂತ್ರಣ ತಪ್ಪಿ ಮನೆ ಮಹಡಿ ಮೇಲೆ ಬಿದ್ದ ಕಾರು

ಸುಳ್ಯ: ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮನೆ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಭಾನುವಾರ ಸುಳ್ಯದಲ್ಲಿ ನಡೆದಿದೆ. ನಿತ್ಯಾನಂದ ಮುಂಡೋಡಿ ಎಂಬುವವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್‍ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್‍ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮೇಲೆ ಬಿದ್ದಿದೆ. […]

Share News

ಸುಳ್ಯ: ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮನೆ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಭಾನುವಾರ ಸುಳ್ಯದಲ್ಲಿ ನಡೆದಿದೆ.

ನಿತ್ಯಾನಂದ ಮುಂಡೋಡಿ ಎಂಬುವವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್‍ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್‍ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮೇಲೆ ಬಿದ್ದಿದೆ.

ಘಟನೆಯಲ್ಲಿ ಕಾರು ಮತ್ತು ಮನೆ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕಿ ಅಪಾಯದಿಂದ ಪಾರಾಗಿದ್ದಾರೆ.  ಬಳಿಕ ಕಾರನ್ನು ಮನೆಯ ಮೇಲ್ಛಾವಣಿಯಿಂದ ತೆಗೆಯಲಾಯಿತು.

Share News