ಮಂಗಳೂರು:- 2026-27ನೇ ಸಾಲಿನ ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಆಗಸ್ಟ್ 2 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ 9 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.
