• Home  
  • ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
- HOME

ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್; ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ನವದಹೆಲಿ: ಮುಡಾ ಕೇಸ್‍ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇ.ಡಿಯನ್ನು ಟೀಕಿಸಿದೆ. ರಾಜಕಾರಣಿಗಳು […]

Share News

ನವದಹೆಲಿ: ಮುಡಾ ಕೇಸ್‍ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇ.ಡಿಯನ್ನು ಟೀಕಿಸಿದೆ.

ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ, ಇದರಲ್ಲಿ ನಿಮಗೆ ಏನು ಕೆಲಸ ಎಂದು ಇಡಿ ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ. ಇಲ್ಲದಿದ್ದರೆ ಇ.ಡಿ ಬಗ್ಗೆ ತೀಕ್ಷ್ಣ ಟಿಪ್ಪಣಿ ಮಾಡಬೇಕಾದಿತು. ನನಗೆ ಇದರ ಬಗ್ಗೆ ಮಹಾರಾಷ್ಟ್ರದಲ್ಲಿ ಕೆಲವು ಅನುಭವಗಳಾಗಿವೆ. ದೇಶದಾದ್ಯಂತ ನೀವು ಇದನ್ನು ಮುಂದುವರಿಸಕೂಡದು ಎಂದು ಇ.ಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರೊಂದಿಗೆ ಸಿಜೆಐ ಕಠಿಣವಾಗಿ ಮಾತನಾಡಿದ್ದಾರೆ.

ಮುಂದುವರಿದು, ಏಕಸದಸ್ಯ ಪೀಠದ ತೀರ್ಪಿನಲ್ಲಿ ನಮಗೆ ಲೋಪ ಕಂಡುಬಂದಿಲ್ಲ. ಹೀಗಾಗಿ ಇಡಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದರು. ಇದರೊಂದಿಗೆ ಇದೀಗ, ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ನಿರಾಳರಾದಂತಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಇ.ಡಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

Share News