• Home  
  • *ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ*
- HOME - STATE

*ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ*

ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.


*ಎಸ್ ಐ ಟಿ ವರದಿ*
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.


*ವಾಹನ ಸೌಲಭ್ಯ*
ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.


*ಹೈಕಮಾಂಡ್ ನದೇ ಅಂತಿಮ ತೀರ್ಮಾನ*
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678