ಬೆಂಗಳೂರು ಅ 07 : ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ.