canaratvnews

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ

ನವದೆಹಲಿ, ಜೂನ್ 10: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು ಹಾಗೂ ಜಾತಿ ಗಣತಿಯ ದತ್ತಾಂಶ ಹತ್ತು ವರ್ಷ ಹಳೆಯದಾಗಿರುವುದರಿಂದ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕಾಗುವುದು ಎಂದು ತಿಳಿಸಿದರು.

Share News
Exit mobile version