DAKSHINA KANNADALATEST NEWS

ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ನಮನ

ಮಂಗಳೂರು: ಮಂಗಳೂರಿನ ಶ್ರೀ ನಾರಾಯಣ ಗುರು ವೃತ್ತಕ್ಕೆ (ಲೇಡಿಹಿಲ್) ಭೇಟಿ ನೀಡಿದ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ಹೂವಿನ ಮಾಲೆ ಅರ್ಪಿಸಿ, ಭಾವಪೂರ್ಣ ನಮನ ಸಲ್ಲಿಸಿದರು.

ಮಂಗಳೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಅವರು ಈ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು “ಸಮಾನತೆ, ಸಹೋದರತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜಗತ್ತಿಗೆ ಸಾರಿದ ಕ್ರಾಂತಿಕಾರಿ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ. ಅವರ ತತ್ವಗಳು ನಮ್ಮ ಸರ್ಕಾರಕ್ಕೆ ಸದಾ ದಾರಿದೀಪ” ಎಂದು ಹೇಳಿದರು.

ಇದೇ ವೇಳೆ ಕರಾವಳಿ ಭಾಗದಲ್ಲಿ ಸಕ್ರಿಯವಾಗಿರುವ ‘ಬಿರುವೆರ್ ಕುಡ್ಲ’ ಸಂಘಟನೆಯು ನಡೆಸುತ್ತಿರುವ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಸಮಾಜದಲ್ಲಿ ಸೌಹಾರ್ದ ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಇಂತಹ ಸಂಘಟನೆಗಳ ಪಾತ್ರ ಹಿರಿದಾದುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪದ್ಮರಾಜ್ ಪೂಜಾರಿ, ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಬಳ್ಳಾಲ್‌ಬಾಗ್ ಸೇರಿದಂತೆ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Share News