DAKSHINA KANNADAHOMELATEST NEWS

ಫೇಸ್ಬುಕ್ ನಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ: FIR ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ  ಬೆಳ್ತಂಗಡಿ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ
ಉಜಿರೆಯ ನಿವಾಸಿಯೋರ್ವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Share News