• Home  
  • Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ
- DAKSHINA KANNADA - HOME - LATEST NEWS - STATE

Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಆಸ್ತಿಯ ಒಡೆಯ,  ಕಾನ್ಫಿಡೆಂಟ್‌ ಗ್ರೂಫನ್‌ ಸಾಮ್ರಾಟ ಡಾ ಸಿ.ಜೆ ರಾಯ್‌ ದುರಂತ ಅಂತ್ಯ ಕಂಡಿದ್ದಾರೆ. ಐಟಿ ದಾಳಿ ವೇಳೆ ಅಧಿಕಾರಿಗಳ ಎದುರೇ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ರಿಚ್ಮಂಡ್ ಸರ್ಕಲ್ ಬಳಿಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಿ.ಜೆ. ರಾಯ್ ಅವರು ತಮ್ಮ ಕಚೇರಿಯ ಒಳಗೆ ಇದ್ದಕ್ಕಿದ್ದಂತೆ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಐಟಿ ದಾಳಿಯ ವೇಳೆ ಅಧಿಕಾರಿಗಳಿಗೆ […]

Share News

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಆಸ್ತಿಯ ಒಡೆಯ,  ಕಾನ್ಫಿಡೆಂಟ್‌ ಗ್ರೂಫನ್‌ ಸಾಮ್ರಾಟ ಡಾ ಸಿ.ಜೆ ರಾಯ್‌ ದುರಂತ ಅಂತ್ಯ ಕಂಡಿದ್ದಾರೆ. ಐಟಿ ದಾಳಿ ವೇಳೆ ಅಧಿಕಾರಿಗಳ ಎದುರೇ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ರಿಚ್ಮಂಡ್ ಸರ್ಕಲ್ ಬಳಿಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಿ.ಜೆ. ರಾಯ್ ಅವರು ತಮ್ಮ ಕಚೇರಿಯ ಒಳಗೆ ಇದ್ದಕ್ಕಿದ್ದಂತೆ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಐಟಿ ದಾಳಿಯ ವೇಳೆ ಅಧಿಕಾರಿಗಳಿಗೆ ದಾಖಲೆ ತರುತ್ತೇನೆ ಎಂದು ಹೋದವರು, ಎದೆಗೆ ಶೂಟ್‌ ಮಾಡಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿ ಕಚೇರಿಯ ಸಿಬ್ಬಂದಿ, ಐಟಿ ಅಧಿಕಾರಿಗಳು ಓಡಿ ಹೋಗಿ ನೋಡುವಷ್ಟರಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು.

ತಕ್ಷಣವೇ ಅವರನ್ನು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೆ, ಅಷ್ಟರಲ್ಲೇ ಕಾಲ ಮಿಂಚಿ ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಿಜೆ ರಾಯ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ತನಿಖೆ ಆರಂಭಿಸಿದ್ದಾರೆ. ಮೃತರಿಗೆ ಪತ್ನಿ ಲಿನಿ ರಾಯ್, ರೋಹಿತ್ ಮತ್ತು ರಿಯಾ ಎಂಬ ಇಬ್ಬರು ಮಕ್ಕಳು ಇದ್ದರು. ಮಗ ರೋಹಿತ್, ಕಾನ್ಫಿಡೆಂಟ್ ಗ್ರೂಪ್‌ನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ವಿನ್ಯಾಸ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ.

Share News