canaratvnews

ಹೈಕಮಾಂಡ್ ಬುಲಾವ್- ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಅಶೋಕ್ ರೈ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳು ಮತ್ತೆ ದಟ್ಟವಾಗಿವೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಶಾಸಕರು ಶುಕ್ರವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆಯೇ ಅಶೋಕ್ ರೈ ಅವರಿಗೆ ಮೊದಲ ಹಂತದಲ್ಲಿಯೇ ಸಚಿವ ಸ್ಥಾನ ಸಿಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಆ ಸಮಯದಲ್ಲಿ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಶಾಸಕರಿಗೆ ಸಚಿವ ಸ್ಥಾನ ಸಿಗಲಿ ಎಂದು ಕ್ಷೇತ್ರಾದ್ಯಂತ ಸರ್ವ ಧರ್ಮಗಳ ಜನರು ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದರು.

ಈಗ ಎರಡನೇ ಅವಧಿಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪ್ರಕ್ರಿಯೆಗಳು ಕೆಲವೇ ದಿನಗಳಲ್ಲಿ ನಡೆಯಲಿವೆ ಎನ್ನಲಾಗುತ್ತಿದೆ. ಈ ನಡುವೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಶೋಕ್ ರೈ ಅವರು ಸಚಿವ ಸಂಪುಟ ಸೇರಲು ಈಗ ಒಂದೇ ಮೆಟ್ಟಿಲು ಬಾಕಿ ಇದೆ ಎಂದು ಅವರ ಆಪ್ತ ವಲಯ ಹಾಗೂ ಬೆಂಬಲಿಗರು ಹೇಳುತ್ತಿದ್ದಾರೆ.

ಅಶೋಕ್ ರೈ ಅವರು ಸಚಿವರಾದರೆ ಪುತ್ತೂರು ಕ್ಷೇತ್ರವು ಸಂಪೂರ್ಣವಾಗಿ ಅಭಿವೃದ್ಧಿಯಾಗಲಿದೆ. ದಶಕಗಳ ಕನಸಾದ ಮೆಡಿಕಲ್ ಕಾಲೇಜು ಯೋಜನೆ ಒಂದೇ ವರ್ಷದೊಳಗೆ ಪೂರ್ಣಗೊಳ್ಳಬಹುದು ಎಂಬ ದೊಡ್ಡ ನಿರೀಕ್ಷೆಯಲ್ಲಿ ಪುತ್ತೂರಿನ ಸಾರ್ವಜನಿಕರು ಇದ್ದಾರೆ.

Share News
Exit mobile version