ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವಕ್ತಾರರಾದ ಲಕ್ಷ್ಮಣ್ ಶೆಟ್ಟಿ (52 ವರ್ಷ) ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದ್ದು, ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದೆ.

ಲಕ್ಷ್ಮಣ್ ಶೆಟ್ಟಿ ಅವರು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಮತ್ತು ಮುಖಂಡರಾಗಿ ಅಮೂಲ್ಯ ಸೇವೆ ಸಲ್ಲಿಸಿದ್ದರು. ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ್ದ ಅವರು, ಸದಾ ಎಲ್ಲ ವರ್ಗದ ಜನರೊಂದಿಗೆ ಅತ್ಯಂತ ಆತ್ಮೀಯವಾಗಿ ಬೆರೆತು ಕೆಲಸ ಮಾಡುತ್ತಿದ್ದರು. ಅವರ ಸರಳತೆ, ನಿಷ್ಠೆ ಹಾಗೂ ಪಕ್ಷದ ಮೇಲಿನ ಬದ್ಧತೆ ಸದಾ ಸ್ಮರಣೀಯವಾಗಿದೆ.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಅವರ ಈ ಅಕಾಲಿಕ ಅಗಲಿಕೆಯು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ, ಹಾಗೂ ಅವರ ಕುಟುಂಬಸ್ಥರು, ಹಿತೈಷಿಗಳು ಮತ್ತು ಅಪಾರ ಅನುಯಾಯಿಗಳಿಗೆ ಈ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಪಿ.ವಿ.ಮೋಹನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮೊಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಬಿ.ಎಚ್.ಖಾದರ್, ಶಶಿಧರ್ ಹೆಗ್ಡೆ, ಯು.ಕೆ.ಮೋನು, ಸುರೇಶ್ ಬಳ್ಳಾಲ್, ಸದಾಶಿವ್ ಉಳ್ಳಾಲ್, ಕೆ.ಹರಿನಾಥ್, ಮಮತಾ ಗಟ್ಟಿ, ನೀರಜ್ ಚಂದ್ರಪಾಲ್, ವಿಕಾಸ್ ಶಟ್ಟಿ, ನಝೀರ್ ಬಜಾಲ್, ಶಬ್ಬೀರ್ ಸಿದ್ದಕಟ್ಟೆ, ಪ್ರೇಮನಾಥ್ ಬಳ್ಳಾಲ್ ಭಾಗ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್, ಜೆ.ಅಬ್ದುಲ್ ಸಲೀಂ, ರಮೇಶ್ ಶೆಟ್ಟಿ ಬೋಲಿಯಾರ್, ಪ್ರಶಾಂತ್ ಕಾಜೆವ, ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಪಿ.ಮೋಹನ್ ಕೋಟ್ಯಾನ್, ಪ್ರವೀಣ್ ಕುಮಾರ್ ಜೈನ್, ಪಿ.ಕೆ.ಅಭಿಲಾಷ್, ಯು.ಟಿ. ತೌಸೀಫ್, ರಾಧಕೃಷ್ಣ ಬೊಳ್ಳೂರ್, ಮಾಜಿ ಮೇಯರ್ ಶಶಿದರ್ ಹೆಗ್ಡೆ, ಭಾಸ್ಕರ್ ಕೆ, ಹರೀನಾಥ್, ಅಬ್ದುಲ್ ರವೂಫ್, ಪ್ರವೀಣ್ ಆಳ್ವಾ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಇಬ್ರಾಹೀಂ ನವಾಝ್, ಅಪ್ಪಿ, ಜೋಕಿಂ ಡಿಸೋಜಾ, ಕೆ.ಕೆ.ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ದಿನೇಶ್ ಮುಳೂರು, ನಾರಾಯಣ ನಾಯ್ಕ್, ಮನೋರಾಜ್ ರಾಜೀವ, ಲಾರೆನ್ಸ್ ಡಿ’ಸೋಜಾ, ಡಾ.ಶೇಖರ್ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ ಕುಲಾಲು, ಬಿ.ಎಂ.ಅಬ್ಬಾಸ್ ಅಲಿ, ಚೇತನ್ ಬೆಂಗ್ರೆ, ಶೈಲಜಾ, ಸುದರ್ಶನ್ ಜೈನ್, ಅಲಿಸ್ಟರ್ ಡಿಕುನ್ಹ, ಉಲ್ಲಾಸ್ ಕೋಟ್ಯಾನ್, ಸುಹಾನ್ ಆಳ್ವ, ಫಯಾಜ್ ಆಮೇಮಾರ್, ಆರಿಫ್ ಭಾವ, ಗಿರೀಶ್ ಶೆಟ್ಟಿ, ರೋಬಿನ್ ಪ್ರೀತಮ್, ದಿನೇಶ್ ಕುಂಪಾಲ, ಏರ್ಪೋರ್ಟ್ ಖಾದರ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸಂಪಾತ ಸೂಚಿಸಿದ್ದಾರೆ.
