• Home  
  • 2028 ರಲ್ಲಿ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ದ ಕ ಜಿಲ್ಲೆಯಲ್ಲಿ 6 ಸೀಟಿನ‌ಗುರಿ ಇದೆ ಶಾಸಕ ಅಶೋಕ್ ರೈ
- LATEST NEWS

2028 ರಲ್ಲಿ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ದ ಕ ಜಿಲ್ಲೆಯಲ್ಲಿ 6 ಸೀಟಿನ‌ಗುರಿ ಇದೆ ಶಾಸಕ ಅಶೋಕ್ ರೈ

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ ,ದೇಶದ ವಿವಿಧ ರಾಜ್ಯಗಳಲ್ಲಿ ಮುಂದೇನಾಗುತ್ತದೋ ಎಂಬ ಭಯ ಅಲ್ಲಿ ನ ಜನರಲ್ಲಿದೆ ಆದರೆ ಕರ್ನಾಟಕದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ ಇದಕ್ಕೆ ಕಾರಣ ಕರ್ನಾಟಕದ ಕಾಂಗ್ರೆಸ್ ಸರಕಾರವಾಗಿದ್ದು ಜನರು ಜೀವನಕ್ಕಾಗಿ ಏನು ಮಾಡಬೇಕೋ ಅದನ್ನು ಸರಕಾರ ಕೊಡುತ್ತಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ರೋಟರಿ ಸಭಾ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ‌ಮಾತನಾಡಿದರು. ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಕಾರ್ಯಕರ್ತರು‌ ಮನೆ ಮನ ಮುಟ್ಟಿಸುವ ಕೆಲಸ […]

Share News

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ ,ದೇಶದ ವಿವಿಧ ರಾಜ್ಯಗಳಲ್ಲಿ ಮುಂದೇನಾಗುತ್ತದೋ ಎಂಬ ಭಯ ಅಲ್ಲಿ ನ ಜನರಲ್ಲಿದೆ ಆದರೆ ಕರ್ನಾಟಕದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ ಇದಕ್ಕೆ ಕಾರಣ ಕರ್ನಾಟಕದ ಕಾಂಗ್ರೆಸ್ ಸರಕಾರವಾಗಿದ್ದು ಜನರು ಜೀವನಕ್ಕಾಗಿ ಏನು ಮಾಡಬೇಕೋ ಅದನ್ನು ಸರಕಾರ ಕೊಡುತ್ತಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಉಪ್ಪಿನಂಗಡಿ ರೋಟರಿ ಸಭಾ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ‌ಮಾತನಾಡಿದರು.
ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಕಾರ್ಯಕರ್ತರು‌ ಮನೆ ಮನ ಮುಟ್ಟಿಸುವ ಕೆಲಸ ಮಾಡಬೇಕು. ಕಾರ್ಯಕರ್ತರು ಕೆಲಸ ಮಾಡಿದರೆ ಮಾತ್ರ ಪಕ್ಷ ಉಳಿಯಲು ಸಾಧ್ಯವಾಗುತ್ತದೆ. ಜನರ ಬೇಡಿಕೆ ಏನಿತ್ತೋ ಅವುಗಳನ್ನು ಪಕ್ಷ ಬೇಧವಿಲ್ಲದೆ ಈಡೇರಿಸಿದ್ದೇನೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಹೇಳಿದರು.
ಉಪ್ಪಿನಂಗಡಿ ಬ್ಲಾಕ್ ನಲ್ಲಿ ಪಕ್ಷ ಸಂಘಟನೆ ಉತ್ತಮವಾಗಿ ನಡೆಯುತ್ತಿದೆ. ಈ ಭಾಗದ ಗ್ರಾಮಗಳಿಗೆ ಭೇಟಿ ನೀಡಿ ಅವರ ಸಮಸ್ಯೆ,ಬೇಡಿಕೆಗಳನ್ನು ಆಲಿಸುವ ಕೆಲಸವನ್ನು ಮಾಡಿದರೆ ಮುಂದೆ ಜನ ನಮ್ಮನ್ನು ಬೆಂಬಲಿಸುತ್ತಾರೆ.

2028 ರಲ್ಲಿ ನಡೆಯುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದೇ ಬರ್ತದೆ ,ದ ಕ ಜಿಲ್ಲೆಯಲ್ಲೂ 5 ಸೀಟುಗಳನ್ನು ಗೆಲ್ಲುವ ಗುರಿ ಇದ್ದು ಅದರಲ್ಲಿ ಯಶಸ್ಸು ಕಾಣಬೇಕಾದರೆ ಕಾರ್ಯಕರ್ತರ ಶ್ರಮ ಮುಖ್ಯವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್,ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ,ಯುವಕ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀದರ್ ರೈ ಮಟಂತಬೆಟ್ಟು, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ,ಹಿರಿಯರಾದ ಡಾ.ರಘು,ಸೇಸಪ್ಪ ನೆಕ್ಕಿಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share News