Site icon canaratvnews

ವಿಟ್ಲ: ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಮೂಡಿಗೆರೆಗೆ ಗಡಿಪಾರು

ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ.

ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳ ದಾಖಲಾತಿ ಮೇಲೆ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

ಸದರಿ ಆದೇಶದಂತೆ ಜನವರಿ 8ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Share News
Exit mobile version