• Home  
  • ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿದ್ದವರ ಬಂಧನ
- DAKSHINA KANNADA - HOME - LATEST NEWS

ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿದ್ದವರ ಬಂಧನ

ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು […]

Share News

ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು ಹರ್ಷ ಮಿಸ್ರಾ (22) ಹಾಗೂ ಮುಹಮ್ಮದ್ ಆಕೀಬ್ ಅಲಿ (27), ನೌಶಾದ್ ಅಲಿ (34), ಬಿಹಾರ್‌ನ ರಾಜೀವ್ ರಂಜನ್ ಕುಮಾರ್ (30), ರಾಜಸ್ತಾನದ ಓಂ ಪ್ರಕಾಶ್ ಯಾದವ್ (37) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 1 ಲ್ಯಾಪ್‌ಟಾಪ್, 21 ಮೊಬೈಲ್ ಪೋನ್‌ಗಳು, ವಿವಿಧ ಕಂಪನಿಯ 20 ಸಿಮ್‌ಕಾರ್ಡ್‌ಗಳು, ಬೇರೆ ಬೇರೆ ಬ್ಯಾಂಕ್‌ಗಳ 20 ಡೆಬಿಟ್-ಕ್ರೆಡಿಟ್ ಕಾರ್ಡ್‌ಗಳನ್ನು ವಶಪಡಿಸಲಾಗಿದೆ. ನಗರದ ವ್ಯಕ್ತಿಯೊಬ್ಬರಿಂದ 1.38 ಕೋ.ರೂ.ವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ ಬಗ್ಗೆ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಪೊಲೀಸರು 11 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉತ್ತರ ಭಾರತ ಮೂಲದ ಈ ವಂಚಕರು ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋ.ರೂ. ವಂಚನೆ ಮಾಡುತ್ತಿದ್ದರು. ಈ ತಂಡದಲ್ಲಿ 16 ಮಂದಿ ಭಾರತೀಯರು ಹಾಗೂ ಚೈನಾದ ಹಲವರಿದ್ದಾರೆ. ನೇಪಾಳದ ಪೊಲೀಸರು ಚೈನಾದ ವಂಚಕರನ್ನು ಬಂಧಿಸಿದ್ದಾರೆ. ಭಾರತೀಯ ವಂಚಕರ ಪೈಕಿ ಐವರು ತಲೆಮರೆಸಿ ಕೊಂಡಿದ್ದು ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದರು.

ಆರೋಪಿಗಳ ಮೊಬೈಲ್ ಫೋನ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಪರಿಶೀಲಿಸಿದಾಗ 624 ಬ್ಯಾಂಕ್ ಖಾತೆಗಳ ವಿವರಗಳು ಕಂಡು ಬಂದಿದೆ. ಈ ಬ್ಯಾಂಕ್ ಖಾತೆಗಳ ಮೇಲೆ 4,580ಕ್ಕೂ ಅಧಿಕ NCRP PORTALನಲ್ಲಿ ಪ್ರಕರಣಗಳು ದಾಖಲಾಗಿದೆ. ಆ ಪೈಕಿ 1 ಬ್ಯಾಂಕ್ ಖಾತೆಯಲ್ಲಿ 167 ಕೋ.ರೂ. ವರ್ಗಾವಣೆಯಾಗಿದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಿಗೆ ಸುಮಾರು 30,70,26,725 ರೂ. ವರ್ಗಾವಣೆಯಾಗಿದೆ.

ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆಯಲು ಬಾಕಿ ಇದೆ ಎಂದು ಮಾಹಿತಿ ನೀಡಿದ್ದಾರೆ. ವಂಚಕರ ಒಂದು ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್‌ರನ್ನು ನೇಮಕ ಮಾಡಿಕೊಂಡು ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDTನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.

ವಂಚಕರ ಇನ್ನೊಂದು ತಂಡವು ಕಾಂಬೋಡಿಯಾ ಮತ್ತಿತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹಣ ಗಳಿಸುವ ಆಮೀಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದಾರೆ.

ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ದೂರುದಾರರಿಗೆ ನೀಡಿದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ NCRP PORTAL ನಲ್ಲಿ ಸುಮಾರು 128 ಪ್ರಕರಣಗಳು ಮತ್ತು 36 ಎಫ್‌ಐಆರ್ ದಾಖಲಾಗಿರುತ್ತದೆ ಎಂದಿದ್ದಾರೆ.

ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operator ಗಳು ಮತ್ತು OTP Worker ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್‌ಸ್ಟಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.

ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ ಶೇ.5ರಿಂದ ಶೇ.10 ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೆಟ್, ಕ್ಯಾಬ್ ಬುಕ್ಕಿಂಗ್, ಹೊಟೇಲ್, ಲಾಡ್ಜ್ ವ್ಯವಸ್ಥೆ ನೀಡುವುದಾಗಿ ಆಮಿಷ ಒಡ್ಡಿ ದುಬೈ, ನೇಪಾಳ ಮತ್ತಿತರ ಕಡೆ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರು ಮತ್ತು ಖಾತೆಗಳನ್ನು ಪೂರೈಸು ವವರಿಗೆ ನಿರ್ದಿಷ್ಟ ಸ್ಥಳದಲ್ಲಿ ವ್ಯವಸ್ಥೆ ಮಾಡುತ್ತಾರೆ.

ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್‌ಗಳಿಗೆ ಖಾತೆದಾರರ ಸಿಮ್‌ಗಳನ್ನು ಹಾಕಿಕೊಂಡು Net Banking ಮುಖಾಂತರ ವಂಚನೆಯ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.

ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು ಭಾರತದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸ್‌ಆ್ಯಪ್ ಮೊಬೈಲ್ ಸಂಖ್ಯೆಗಳ ಮೂಲಕ ಇನ್‌ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್‌ಬುಕ್‌ಗಳ ಮೂಲಕ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆಮಿಷವೊಡ್ಡುತ್ತಾರೆ.

ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಾಂಶ ಬಂದಿರುವುದಾಗಿ ಆ್ಯಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪಪ್ರಮಾಣದ ಲಾಭಾಂಶದ ಹಣ ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಒತ್ತಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು ಸುಮಾರು 60 ಲಕ್ಷದಿಂದ 1 ಕೋ.ರೂ.ವರೆಗೆ ಹೂಡಿಕೆ ಮಾಡಿಸುತ್ತದೆ.

ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿವಿದೇಶಗಳಲ್ಲಿ ಕೆಲಸಕ್ಕೆ ಯತ್ನಿಸುತ್ತಿರುವ ಯುವಕರಿಗೆ ನಕಲಿ ಜಾಹಿರಾತು ಅಥವಾ ಏಜೆಂಟ್‌ಗಳ ಮೂಲಕ ನಂಬಿಸಿ ಅವರನ್ನು ಟೂರಿಸ್ಟ್ ವೀಸಾದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳು ಮತ್ತು ಪಾಸ್‌ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲೇ ವಶದಲ್ಲಿಟ್ಟುಕೊಳ್ಳುತ್ತಾರೆ.

ಅವರಿಂದಲೇ ಅಮಾಯಕ ಹೂಡಿಕೆದಾರರಿಗೆ ಅವರ ಮಾತೃಭಾಷೆಯಲ್ಲೇ ಮಾತನಾಡಿಸಿ ಹಣ ವರ್ಗಾಯಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ, ಉಪಹಾರ ನೀಡದೆ ಮತ್ತು ಕುಟುಂಬದೊಂದಿಗೆ ಸಂಪರ್ಕ ಮಾಡಲು ಅವಕಾಶ ಕೊಡದೆ ಕೂಡಿ ಹಾಕುತ್ತಾರೆ.

ಭಾರತೀಯರನ್ನು ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿ ಪಡೆದು ಅವರ ಮೂಲಕ ಕೆಲಸಗಳನ್ನು ಪಡೆದು ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.

ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದ ದ.ಕ. ಜಿಲ್ಲೆಯ 6 ಮಂದಿಯನ್ನು ರಕ್ಷಿಸಲಾಗಿದೆ. ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. *ವಂಚಕರು ಆನ್‌ಲೈನ್ ಮೂಲಕ USDTಗಳನ್ನು ಖರೀದಿ ಮಾಡಿಕೊಂಡು..

Share News