ಮಂಗಳೂರು, ಜು.15:-ನಾಗರೀಕರು ಚುನಾವಣೆ ಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ.
ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯು ಚುರುಕಾಗಿ ನಡೆಯುತ್ತಿದ್ದು, ಈಗಾಗಲೇ ಬಹುತೇಕ ಮತದಾರರಿಗೆ ಎನ್ಯುಮರೇಶನ್ ಫಾರಮನ್ನು ವಿತರಿಸಲಾಗಿದೆ. ಮತದಾರರು ಫಾರಮನ್ನು ಭರ್ತಿ ಮಾಡಿ ಬಿ.ಎಲ್.ಓ.ಗಳಿಗೆ ನೀಡಿದ ನಂತರ ಇದನ್ನು ಡಿಜಿಟೈಸ್ ಪ್ರಕ್ರಿಯೆ ನಡೆಸಿ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಮಗ್ರ ಶಿಕ್ಷಣ ಉಪಯೋಜನಾ ಸಮನ್ವಯಾಧಿಕಾರಿ ಸುಮಂಗಳಾ ನಾಯಕ್ ಸ್ವಾಗತಿಸಿದರು. ಗಾಯತ್ರಿ ನಿರೂಪಿಸಿದರು.