ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎ. 11 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 2:55 – ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಉಳ್ಳಾಲ ದರ್ಗಾ ಆವರಣದಲ್ಲಿ ಉಳ್ಳಾಲ ದರ್ಗಾ ಉರೂಸ್ ಕುರಿತು ಪೂರ್ವಭಾವಿ ಸಭೆ. ಸಂಜೆ 4:30 – ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ನೂತನ ಶವಗಾರ ಕಟ್ಟಡ, ನೂತನ ಡಯಾಲಿಸಿಸ್ ಘಟಕ ಹಾಗೂ ವಿಕಲಚೇತ ನರ ಪುನಃಶ್ಚೇತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ
ಹಾಗೂ ಉಳ್ಳಾಲ ಆಯುಷ್ ಕೇಂದ್ರದ ಹೆಚ್ಚುವರಿ ಕಟ್ಟಡಕ್ಕೆ ಶಂಕುಸ್ಥಾಪನೆ. 6 ಪೆರ್ಮನ್ನೂರು ಸೈಂಟ್ ಸೆಬೆಸ್ಟಿಯನ್ ಚರ್ಚ್‌ಗೆ ಭೇಟಿ, 7 ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರ ನಿತ್ಯ ಪೂಜಾ ಕಾರ್ಯದಲ್ಲಿ ಭಾಗಿ, ರಾತ್ರಿ 9: 05 ಗಂಟೆಗೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.