ಮಂಗಳೂರು, ಮಾರ್ಚ್ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (LPG) ಸಿಲಿಂಡರ್‌ಗಳ ದಾಸ್ತಾನು ಸಮರ್ಪಕವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹ ಬಳಕೆ ಅಡುಗೆ ಅನಿಲ ಸರಬರಾಜಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ದೂರು ಅಥವಾ ಕುಂದುಕೊರತೆಗಳಿದ್ದಲ್ಲಿ ತಕ್ಷಣ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

