ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ ಜನ್ಮದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ ಅವರು ಮಂಗಳೂರಿನ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ, ಗುರುಗಳ ದರುಶನ ಪಡೆದರು.
ಕ್ಷೇತ್ರಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿಯ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಲಾಯಿತು.

ಈ ಧಾರ್ಮಿಕ ಹಾಗೂ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಕುದ್ರೋಳಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜೈರಾಜ್ ಎಚ್.ಎಸ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಕಿಶೋರ್ ದಂಡೆಕೇರಿ, ಕೃತೀನ್ ಧೀರಜ್ ಅಮೀನ್, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶೈಲೇಂದ್ರ ಸಿ. ಸುವರ್ಣ, ಪಿ.ಕೆ. ಗೌರವಿ ರಾಜಶೇಖರ್, ಯೋಗೀಶ್ ಕೋಟ್ಯಾನ್ ಸೇರಿದಂತೆ ಕ್ಷೇತ್ರದ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು
