DAKSHINA KANNADAHOMELATEST NEWS

ಬಂಟ್ವಾಳ: ನಾಪತ್ತೆಯಾಗಿದ್ದ ಜೀವನ್ ಪಿಂಟೋ ಮೃತದೇಹ ಪತ್ತೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಲುಸಂಕ ದಾಟುವಾಗ ಆಕಸ್ಮಿಕವಾಗಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಸೋಮವಾರ ತಾಲೂಕಿನ ಸಂಗಬೆಟ್ಟು ಎಂಬಲ್ಲಿ ಪತ್ತೆಯಾಗಿದೆ. ಮೃತರನ್ನು ರಾಯಿ ಗ್ರಾಮದ ಪಂಚಕೋಡಿ ನಿವಾಸಿ ಜೀವನ್ ಪಿಂಟೋ (48 ವರ್ಷ) ಎಂದು ಗುರುತಿಸಲಾಗಿದೆ.

ಆಗಸ್ಟ್ 1 ರ ಶನಿವಾರ ರಾತ್ರಿ ಸುಮಾರು 7:30 ರ ವೇಳೆಗೆ ಜೀವನ್ ಪಿಂಟೋ ಅವರು ತಮ್ಮ ಮನೆಯಿಂದ ಹತ್ತಿರದಲ್ಲೇ ಇರುವ ಚಿಕ್ಕಪ್ಪನ ಮನೆಗೆ ತೆರಳುತ್ತಿದ್ದರು. ಈ ವೇಳೆ ದಾರಿಯ ಮಧ್ಯೆ ಇರುವ ಕಿರಿದಾದ ಕಾಲುಸಂಕದ ಮೂಲಕ ತುಂಬಿ ಹರಿಯುತ್ತಿದ್ದ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಸ್ಥಳದಲ್ಲಿ ಅವರ ಟಾರ್ಚ್ ಹಾಗೂ ಚಪ್ಪಲಿಗಳು ಪತ್ತೆಯಾಗಿದ್ದವು. ಭಾರಿ ನೀರಿನ ಹರಿವು ಮತ್ತು ಕತ್ತಲೆಯ ಕಾರಣದಿಂದ ಶನಿವಾರ ರಾತ್ರಿ ತಕ್ಷಣದ ಶೋಧ ಕಾರ್ಯಾಚರಣೆಗೆ ತೊಂದರೆಯಾಗಿತ್ತು.

ಯಶಸ್ವಿ ಶೋಧ ಕಾರ್ಯಾಚರಣೆ: ನಾಪತ್ತೆಯಾದ ವ್ಯಕ್ತಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ದಳ, ಬಂಟ್ವಾಳ ಗ್ರಾಮಾಂತರ ಪೊಲೀಸರು ಹಾಗೂ ಸ್ಥಳೀಯ ಸಾರ್ವಜನಿಕರು ಭಾನುವಾರ ಬೆಳಿಗ್ಗೆಯಿಂದಲೇ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ನಿರಂತರ ಪ್ರಯತ್ನದ ಫಲವಾಗಿ ಸೋಮವಾರ ಸಂಗಬೆಟ್ಟು ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

Share News