canaratvnews

ಯುವ ವೈದ್ಯೆ ಕೀರ್ತನಾ ಜೋಶಿ ಸಾವಿಗೆ ಶರಣು

ಪುತ್ತೂರು: ಇಲ್ಲಿನ ಬಪ್ಪಳಿಗೆ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27 ವ.) ಅವರು ಸೋಮವಾರ ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.

Share News
Exit mobile version