canaratvnews

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು.

ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. ವರದಿ ಕೊಡುವವರೆಗೂ ಆ ಬಗ್ಗೆ ಮಾತನಾಡಲು ಹೋಗಲ್ಲ. ತನಿಖೆ ನಡೆಯುವಾಗ ನಾವು ಮಾತಾಡೋದು ಸಮಂಜಸ ಅಲ್ಲ ಎಂದು ಹೇಳಿದರು.

Share News
Exit mobile version