ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರಿಂದ 3 ರೂಪಾಯಿಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44ರಷ್ಟು ಇದ್ದ ತೆರಿಗೆ, ಇದೀಗ ಶೇಕಡ 21.17ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಡಿಸೇಲ್ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿತ್ತು.
ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿತ್ತು. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವ ಮೂಲಕ ನೆರೆ ರಾಜ್ಯಕ್ಕಿಂತಲೂ ಕಡಿಮೆ ಡೀಸೆಲ್ ದರ ರಾಜ್ಯದಲ್ಲಿ ಇದೆ ಎಂದು ದರ ಏರಿಕೆಯನ್ನು ಸಮರ್ಥಿಸಿಕೊಂಡಿದೆ.