canaratvnews

ಮಾ. 28 ರಿಂದ ಮಾ. 29 ರವರೆಗೆ ಮದ್ಯದಂಗಡಿ ಬಂದ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾ. 28 ರಿಂದ ಮಾ. 29 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ.

ಸಾವಿರಾರು ಜನ ಭಕ್ತಾಧಿಗಳು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ

ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ  ಸಂಪಾಜೆ ಗ್ರಾಮದ  ಕಲ್ಲುಗುಂಡಿಯ ಕವಿತಾ ವೈನ್ಸ್, ಅಥಿತಿ ವೈನ್ಸ್(ಸಮಾಧಾನ್ ಬಾರ್)  ಮದ್ಯದಂಗಡಿಯನ್ನು

ಮುಚ್ಚಲು  ಹಾಗೂ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share News
Exit mobile version