ಮಂಗಳೂರು ಜು.25 ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅವರು ಶುಕ್ರವಾರ ಉರ್ವಸ್ಟೋರ್ ಡಿ ದೇವರಾಜ ಅರಸು ಭವನ ನೂತನ ಕಟ್ಟಡ ಮತ್ತು ಇಂದಿರಾ ಗಾಂಧಿ ಮಹಿಳಾ ನಸಿರ್‍ಂಗ್ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟಿಸಿ, ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿವಿಧ ಯೋಜನೆ ಮತ್ತು ಕಾಮಗಾರಿಗಳನ್ನು ಜಾರಿಗೊಳಿಸುವಾಗ ಜಿಲ್ಲೆಯ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಪರಿಗಣಿಸಲಾಗುವುದು. ಜನರ ಏಳಿಗೆ ಅಂತಿಮ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರ ವಿಶ್ವಾಸ ತೆಗೆದುಕೊಂಡು ಮುನ್ನಡೆಸಲಾಗುವುದು ಎಂದು ಸಚಿವರು ಹೇಳಿದರು.
ಇಂದು ಸುಮಾರು 5 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ಗಳನ್ನು ಉದ್ಘಾಟಿಸಲಾಗಿದೆ. ಅದೇ ರೀತಿ ಎರಡು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಶಿಲಾನ್ಯಾಸ ಮಾಡಲಾಗಿದೆ. ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಅಧಿಕ ಸಂಖ್ಯೆಯಲ್ಲಿದ್ದು ಇಲ್ಲಿಗೆ ವಿದ್ಯಾಭ್ಯಾಸ ಮಾಡಲು ವಿವಿಧ ಜಿಲ್ಲೆಯ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಾಸ್ಟೆಲ್‍ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಆದ್ಯತೆ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಹೆಣ್ಣು ಮಕ್ಕಳ ಸಶಕ್ತೀಕರಣಕ್ಕೆ ಸರಕಾರ ಬದ್ಧವಾಗಿದ್ದು, ಉಚಿತ ಬಸ್ ಪ್ರಯಾಣ, ಮಾಸಿಕ 2,000 ನೀಡುವ ಯೋಜನೆಯು ಹೆಣ್ಣುಮಕ್ಕಳ ಸ್ವಾವಲಂಬನೆ ಉದ್ದೇಶವನ್ನು ಹೊಂದಿದೆ ಎಂದು ಸಚಿವರು ತಿಳಿಸಿದರು.
ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಈ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಕರ್ನಾಟಕ ಅರೆ ಭಾμÉ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ಎನ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.