• Home  
  • ದ ಕ ಜಿಲ್ಲಾ ಬಿಜೆಪಿ ವತಿಯಿಂದ ‘ಜನ ಕಲ್ಯಾಣದ 12 ವರ್ಷಗಳು’ ಅಭಿಯಾನ: ಶಕ್ತಿನಗರದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ
- LATEST NEWS

ದ ಕ ಜಿಲ್ಲಾ ಬಿಜೆಪಿ ವತಿಯಿಂದ ‘ಜನ ಕಲ್ಯಾಣದ 12 ವರ್ಷಗಳು’ ಅಭಿಯಾನ: ಶಕ್ತಿನಗರದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ “ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು” ಅಭಿಯಾನದ ಅಂಗವಾಗಿ ಮಂಗಳೂರಿನ ಶಕ್ತಿನಗರದ ನಾಲ್ಯಪದವು ಸರ್ಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಅಭಿವೃದ್ಧಿ […]

Share News

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ “ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು” ಅಭಿಯಾನದ ಅಂಗವಾಗಿ ಮಂಗಳೂರಿನ ಶಕ್ತಿನಗರದ ನಾಲ್ಯಪದವು ಸರ್ಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಅಭಿವೃದ್ಧಿ ಮತ್ತು ಜನಕಲ್ಯಾಣದ ಕಾರ್ಯಗಳ ಜೊತೆಗೆ ಪರಿಸರ ಸಂರಕ್ಷಣೆಯೂ ಪಕ್ಷದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಡಾ. ಮಂಜುಳಾ ರಾವ್, ಜಿಲ್ಲಾ ಕಾರ್ಯದರ್ಶಿಗಳಾದ ಧನಲಕ್ಷ್ಮಿ ಗಟ್ಟಿ, ಸುಜಿತ್ ಪ್ರತಾಪ್, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರಾದ ನಂದನ್ ಮಲ್ಯ ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಲಕಿತ ಶೆಟ್ಟಿ, ಸಂಧ್ಯಾ ವೆಂಕಟೇಶ್, ಕಮಲಾಕ್ಷಿ ಪೂಜಾರಿ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Share News