• Home  
  • ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪಿಯೂಸ್ ರೋಡ್ರಿಗಸ್ ಉಮೇದುವಾರಿಕೆ
- COMMUNITY NEWS - DAKSHINA KANNADA - LATEST NEWS

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪಿಯೂಸ್ ರೋಡ್ರಿಗಸ್ ಉಮೇದುವಾರಿಕೆ

ಬಂಟ್ವಾಳ, ಜುಲೈ 30: ಕೆಪಿಸಿಸಿ ಹೈಕಮಾಂಡ್ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಅವರು ಜಿಲ್ಲಾಧ್ಯಕ್ಷ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ವೀಕ್ಷಕರು ಹಾಗೂ ಕ್ಯಾಲಿಕಟ್ ಶಾಸಕರಾದ ಜಯಂತ್ ಅವರನ್ನು ಭೇಟಿಯಾದ ಪಿಯೂಸ್ ರೋಡ್ರಿಗಸ್, ಈ ಬಾರಿ ತಮಗೆ ಜಿಲ್ಲಾ ಕಾಂಗ್ರೆಸ್ ಘಟಕದ ಚುಕ್ಕಾಣಿ ಹಿಡಿಯಲು ಅವಕಾಶ […]

Share News

ಬಂಟ್ವಾಳ, ಜುಲೈ 30: ಕೆಪಿಸಿಸಿ ಹೈಕಮಾಂಡ್ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಅವರು ಜಿಲ್ಲಾಧ್ಯಕ್ಷ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ವೀಕ್ಷಕರು ಹಾಗೂ ಕ್ಯಾಲಿಕಟ್ ಶಾಸಕರಾದ ಜಯಂತ್ ಅವರನ್ನು ಭೇಟಿಯಾದ ಪಿಯೂಸ್ ರೋಡ್ರಿಗಸ್, ಈ ಬಾರಿ ತಮಗೆ ಜಿಲ್ಲಾ ಕಾಂಗ್ರೆಸ್ ಘಟಕದ ಚುಕ್ಕಾಣಿ ಹಿಡಿಯಲು ಅವಕಾಶ ನೀಡುವಂತೆ ಅಧಿಕೃತವಾಗಿ ಅರ್ಜಿ ಸಲ್ಲಿಸಿ ಮನವಿ ಮಾಡಿದರು.

ಕ್ರಿಶ್ಚಿಯನ್ ಸಮುದಾಯಕ್ಕೆ ಅವಕಾಶ ನೀಡಲು ಮನವಿ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಕೋಟಾದಡಿಯಲ್ಲಿ ತಮಗೆ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ನಿಭಾಯಿಸಲು ಅವಕಾಶ ನೀಡಬೇಕೆಂದು ಪಿಯೂಸ್ ರೋಡ್ರಿಗಸ್ ವೀಕ್ಷಕರಲ್ಲಿ ವಿನಂತಿಸಿದ್ದಾರೆ. ತಳಮಟ್ಟದಿಂದಲೇ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ಇವರು, ಜಿಲ್ಲೆಯ ಕ್ರೈಸ್ತ ಸಮುದಾಯದ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ.

ಪಕ್ಷ ನಿಷ್ಠೆ ಮತ್ತು ಆಡಳಿತಾತ್ಮಕ ಅನುಭವ

ಪಕ್ಷದ ಪರ ನಿರಂತರ ಕಾರ್ಯಚಟುವಟಿಕೆಗಳಿಂ ದಾಗಿ ಹೈಕಮಾಂಡ್ ನಾಯಕರ ವಿಶ್ವಾಸ ಗಿಟ್ಟಿಸುವಲ್ಲಿ ಯಶಸ್ವಿಯಾಗಿರುವ ಪಿಯೂಸ್ ರೋಡ್ರಿಗಸ್, ಈ ಹಿಂದೆ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ ಅನುಭವ ಹೊಂದಿದ್ದಾರೆ.

*ರಾಜ್ಯ ಮಟ್ಟದ ಸೇವೆ: ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಣೆ. *ಸ್ಥಳೀಯ ಆಡಳಿತ: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ (BUDA) ಅಧ್ಯಕ್ಷರಾಗಿ ಯಶಸ್ವಿ ಸೇವೆ.

ಸಾಮಾಜಿಕ ಬಾಂಧವ್ಯ ಮತ್ತು ಪಕ್ಷ ಸಂಘಟನೆಯ ಸಂಕಲ್ಪ ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಹಾಗೂ ಯುವ ಸಮುದಾಯದೊಂದಿಗೆ ನಿಕಟ ಬಾಂಧವ್ಯ ಹೊಂದಿರುವ ಇವರು, ಜಿಲ್ಲೆಯ ವಿವಿಧ ಸಾಮಾಜಿಕ, ಧಾರ್ಮಿಕ, ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಸುದೀರ್ಘ ಸಾಂಘಿಕ ಅನುಭವದ ಹಿನ್ನೆಲೆಯನ್ನು ಮುಂದಿಟ್ಟುಕೊಂಡು, ಈ ಬಾರಿ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಹೈಕಮಾಂಡ್ ತಮಗೆ ಅವಕಾಶ ನೀಡಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Share News