DAKSHINA KANNADAHOMELATEST NEWS

ನಾಳೆ ಪುತ್ತೂರಿಗೆ ಡಿ.ಕೆ. ಶಿವಕುಮಾರ್: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೆ.6ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಅಪರಾಹ್ನ 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವಷರ್ದ ಕಾಂಚನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ಫೆ.7ರಂದು ಬೆಳಗ್ಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Share News