DAKSHINA KANNADA

ರೇಬಿಸ್ ವಿರುದ್ಧ ಲಸಿಕಾ ಶಿಬಿರ

ಮಂಗಳೂರು, ಸೆ.26 : ವಿಶ್ವ ರೇಬಿಸ್ ದಿನಾಚರಣೆ ಪ್ರಯುಕ್ತ ನಗರದ ಜೈಲು ರಸ್ತೆಯಲ್ಲಿರುವ ಜಿಲ್ಲಾ ಪಶುವೈದ್ಯಕೀಯ ಪಾಲಿಕ್ಲಿನಿಕ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಾಕು ಪ್ರಾಣಿಗಳಿಗೆ ರೇಬಿಸ್ ವಿರುದ್ಧ ಉಚಿತ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಾಕು ಪ್ರಾಣಿಗಳಿಗೆ ರೇಬಿಸ್ ರೋಗದ ವಿರುದ್ದ ಲಸಿಕೆ ಹಾಕಿಸಿಕೊಳ್ಳುವಂತೆ ಜಿಲ್ಲಾ ಪಾಲಿಕ್ಲಿನಿಕ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News