ಜಮ್ಮು: ಭಾರತದ ಮೇಲೆ ಮತ್ತೆ ಪಾಕಿಸ್ತಾನ ದಾಳಿಗೆ ಮುಂದಾಗಿದ್ದು ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ.
ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ.
ಆದರೆ ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ.
ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್ಎಸ್ ಪುರ, ಅರ್ನಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕಡೆಗೆ ಪಾಕಿಸ್ತಾನದಿಂದ ಎಂಟು ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳು ವರದಿ ಮಾಡಿವೆ–ಇವೆಲ್ಲವನ್ನೂ ಎಸ್ -400 ಯಶಸ್ವಿಯಾಗಿ ಹೊಡೆದುರುಳಿಸಿದೆ.
ರಾತ್ರಿ 9 ಗಂಟೆಯ ನಂತರ ರಾಜಸ್ಥಾನದ ಗಡಿ ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ವರದಿಗಳು ತಿಳಿಸಿವೆ.
https://x.com/DivyaSoti/status/1920501513341804818?ref_src=twsrc%5Etfw%7Ctwcamp%5Etweetembed%7Ctwterm%5E1920501513341804818%7Ctwgr%5Eb7f2e4455ad2f7eb259779f1a121dc65c1f9fe49%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2025%2FMay%2F08%2Fdrone-attack-by-pakistan-in-jammu-air-raid-sirens-go-off-india-retaliates