canaratvnews

ಜು.3 ರಂದು ಶಾಲಾ & ಕಾಲೇಜಿಗೆ ರಜೆ: ತರಗತಿ ನಡೆದರೆ ಕಾನೂನು ಕ್ರಮ ಎಂದ ಡಿಸಿ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.3 ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಆದೇಶ ಮೀರಿ ತರಗತಿ ನಡೆಸಿದರೆ ಕಠಿಣ ಕ್ರಮ ಜರಗಿಸಲಾಗುವುದು ಎಂದು ಇದೇ ಆದೇಶದಲ್ಲಿ ತಿಳಿಸಿದ್ದಾರೆ. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನೀರು ಇರುವ ತಗ್ಗು ಪ್ರದೇಶ ಹಾಗೂ ಕೆರೆ& ನದಿ ತೀರದ ಪ್ರದೇಶಗಳಿಗೆ ತೆರಳದಂತೆ ಮುನ್ನಚ್ಚೆರಿಕೆ ವಹಿಸುವಂತೆ ತಿಳಿಸಲಾಗಿದೆ.

 

Share News
Exit mobile version